Breaking News

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಗಾಂಜಾ, ಎಂಡಿಎಂಎ ಹಾಗೂ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆರು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಮೂವರು ಹೊರ ರಾಜ್ಯದವರು ಹಾಗೂ ಮೂವರು ಸ್ಥಳೀಯರು. ಆರೋಪಿಗಳಿಂದ ಒಟ್ಟು ₹14.94 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಬೊಮ್ಮನಹಳ್ಳಿ, ಸಿಟಿ ಮಾರ್ಕೆಟ್, ಡಿ.ಜೆ.ಹಳ್ಳಿ ಹಾಗೂ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟದ ಬಗ್ಗೆ ಬಂದ ಮಾಹಿತಿ ಆಧರಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಮಾಹಿತಿ ಆಧರಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 25.37 ಕೆಜಿ ಗಾಂಜಾ, 20 ಗ್ರಾಂ ಎಂಡಿಎಂಎ ಹಾಗೂ 7 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *