ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ 53 ವರ್ಷದ ವ್ಯಕ್ತಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂದು ಗುರುತಿಸಲಾಗಿದೆ. ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕನ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ಕುಳಿತಿದ್ದ. ಪ್ರಯಾಣದ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭ ಅಲ್ಲಿಗೂ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 179/2026ರಂತೆ ಪೋಕ್ಸೋ ಕಾಯ್ದೆ-2012ರ ಕಲಂ 4(2) ಹಾಗೂ ಬಿಎನ್‌ಎಸ್-2023ರ ಕಲಂ 351(2)ರಡಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

