ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಘಟನೆ ಬಳಿಕ ಅರಣ್ಯ ಇಲಾಖೆಯ ಆಂಟಿ ಪೋಚಿಂಗ್ ಕ್ಯಾಂಪ್‌ಗಳಿಗೆ ದುಷ್ಕರ್ಮಿಗಳು ನುಗ್ಗಿ ಜಿಲೆಟಿನ್ ಬಳಸಿ ಸ್ಫೋಟ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಳ್ಳಮರದ ಹಟ್ಟಿ, ಮತ್ತಿಪುರ, ಬೂದಿಕೆರೆ ಹಾಗೂ ಕಳ್ಳಿದೊಡ್ಡಿ ಕ್ಯಾಂಪ್‌ಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಶೂಟೌಟ್‌ಗೆ ಪ್ರತೀಕಾರವಾಗಿ ದಾಳಿ ನಡೆದಿದೆಯೇ, ಅರಣ್ಯದೊಳಗೆ ಸ್ಫೋಟಕಗಳು ಹೇಗೆ ತಲುಪಿದವು ಎಂಬ ಪ್ರಶ್ನೆಗಳು ಮೂಡಿವೆ. ಪ್ರಕರಣದ ನಾಲ್ಕನೇ ಆರೋಪಿ ಮಹಿಮ್ ದಾಸ್ ಚಿಕಿತ್ಸೆ ಬಳಿಕ ನಾಪತ್ತೆಯಾಗಿರುವುದು ಕೂಡ ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಅಜ್ಞಾತ ಸ್ಥಳದಿಂದ ಮಹಿಮ್ ದಾಸ್ ವಿಡಿಯೋಗಳನ್ನು ಹರಿಬಿಡುತ್ತಿರುವುದಾಗಿ ವರದಿಯಾಗಿದೆ. ಶೂಟೌಟ್, ಕ್ಯಾಂಪ್‌ಗಳ ಮೇಲಿನ ದಾಳಿ ಹಾಗೂ ನಾಲ್ಕನೇ ಆರೋಪಿಯ ನಾಪತ್ತೆ ಸೇರಿದಂತೆ ಎಲ್ಲ ಬೆಳವಣಿಗೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ನಿಜಾಂಶ ಹೊರತರಬೇಕೆಂಬ ಒತ್ತಾಯ ಕೇಳಿಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

