ಬೆಂಗಳೂರು ದಕ್ಷಿಣ ತಾಲ್ಲೂಕಿನ ಸಿ.ಕೆ. ತಾಂಡ್ಯಾ ಗ್ರಾಮದ ಫಾರಂ ಹೌಸ್‌ನಲ್ಲಿ ನಡೆಯುತ್ತಿದ್ದ ನಕಲಿ ಔಷಧ ತಯಾರಿಕೆ ಜಾಲದ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಮಂಡಳಿ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು ₹6 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡು, ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. ತೆಲಂಗಾಣ, ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಔಷಧಗಳನ್ನು ತರಿಸಿಕೊಂಡು, ₹600 ಮೌಲ್ಯದ ಔಷಧಕ್ಕೆ ₹6 ಸಾವಿರದ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳು ಫಾರಂ ಹೌಸ್ ಅನ್ನು ಬಾಡಿಗೆಗೆ ಪಡೆದಿದ್ದರು ಎನ್ನಲಾಗಿದೆ. ಪ್ಯಾಕ್ ಮಾಡಿದ ಔಷಧಗಳು, ಲೇಬಲ್‌ಗಳು, ಖಾಲಿ ಬಾಟಲಿಗಳು ಹಾಗೂ ಅವಧಿ ಮುಗಿದ ಔಷಧಗಳು ಕೂಡ ಪತ್ತೆಯಾಗಿವೆ. ನಕಲಿ ಔಷಧ ಜಾಲ ಕಳೆದ ಒಂದು ವರ್ಷದಿಂದ ಸಕ್ರಿಯವಾಗಿದ್ದು, ಬೆಂಗಳೂರು ಸೇರಿದಂತೆ ವಿವಿಧೆಡೆ ಹಾಗೂ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಜಾಲದ ಕುರಿತು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

