Breaking News

ಬಾಡಿಗೆಗಿದ್ದ ವಿದ್ಯಾರ್ಥಿನಿಗೆ ಮಾಲೀಕನಿಂದ ಲೈಂಗಿಕ ಕಿರುಕುಳ; 60 ವರ್ಷದ ಕಾಮುಕ ಬಂಧನ

ಬೆಂಗಳೂರು ಶಾಂತಿನಗರದ ಬರ್ಲಿ ಸ್ಟ್ರೀಟ್‌ನ ಅಪಾರ್ಟ್‌ಮೆಂಟ್‌ನಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 60 ವರ್ಷದ ಮನೆ ಮಾಲೀಕ ಕಮಲೇಶ್ ಕುಮಾರ್‌ನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಯುವತಿ ಕಳೆದ ಎರಡೂವರೆ ತಿಂಗಳಿಂದ ಆರೋಪಿಯ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆಗೆ ವಾಸವಿದ್ದಳು. ಯುವತಿ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ರಿಪೇರಿ ಕೆಲಸದ ನೆಪದಲ್ಲಿ ಮನೆಗೆ ಬಂದಿದ್ದ ಆರೋಪಿ, ಮೆಹಂದಿ ನೋಡುವ ನೆಪದಲ್ಲಿ ಆಕೆಯ ಕೈ ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಯುವತಿ ಆರೋಪಿಯಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ BNS ಸೆಕ್ಷನ್ 74 ಹಾಗೂ 75(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಮಲೇಶ್ ಕುಮಾರ್‌ನನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪಿಜಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವ ಒಂಟಿ ಯುವತಿಯರ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗಿದ್ದು, ಸಿಸಿಟಿವಿ ಹಾಗೂ ಮನೆ ಮಾಲೀಕರ ಹಿನ್ನೆಲೆ ಪರಿಶೀಲನೆಗೆ ಒತ್ತು ನೀಡುವ ಅಗತ್ಯವಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *