Breaking News

ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ

ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜುಲೈ 25ರಂದು ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವ್ಯವಹಾರ ಹಾಗೂ ಜಮೀನು ವಿವಾದದ ಹಿನ್ನೆಲೆಯಲ್ಲಿ ಬಾರ್ ಮಾಲೀಕ ಹನಮಂತ ಅಥಣಿ ಅವರಿಗೆ ಬೆದರಿಕೆ ಹಾಕಿ ಕೊಲೆ ಮಾಡುವ ಉದ್ದೇಶದಿಂದ ಕಾರಿನಲ್ಲಿ ಸ್ಫೋಟಕ ಇಡಲಾಗಿತ್ತು ಎಂದು ಎಸ್ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ. ಶಿವಾನಂದ ಜಲ್ಲಿ, ರೇವಣಪ್ಪ ಜಲ್ಲಿ, ಮಹದೇವ ಸಂಗಾಪೂರ ಹಾಗೂ ಮಲ್ಲಿಕಾರ್ಜುನ ಭದ್ರಪನವರ ಬಂಧಿತರು. ಸ್ಫೋಟಕ ವಸ್ತು ಪೂರೈಸಿದ ಆರೋಪದ ಗಜಾನನ ಸಂಗಾಪುರ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ. ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳಿಗೆ ನೆರವು ನೀಡಿದವರು ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದ್ದು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ತನಿಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಯನ್ನು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *