ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ 20 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರುಕುಳ ನೀಡಿದ ಆರೋಪದಡಿ ದರ್ಶನ್, ಅಕ್ಷಯ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಿ.ಎಸ್ಸಿ. ಕೋರ್ಸ್‌ಗೆ ಪ್ರವೇಶ ಪಡೆಯಲು ಸಿದ್ಧತೆ ನಡೆಸುತ್ತಿದ್ದ ಯುವತಿ, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯುವತಿ ಹಾಗೂ ದರ್ಶನ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಈ ವಿಚಾರ ತಿಳಿದ ಹಿರಿಯರು ಬುದ್ಧಿವಾದ ಹೇಳಿದ್ದರು. ಇದೇ ವೇಳೆ ವಿವಾಹಿತ ಅಕ್ಷಯ್ ಯುವತಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಆಕೆ ಮನೆಯಲ್ಲಿ ಒಂಟಿಯಾಗಿದ್ದಾಗ ಒಳನುಗ್ಗಿ ವಿಡಿಯೊ ಚಿತ್ರೀಕರಿಸಿ ಬೆದರಿಸುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ಕಿರುಕುಳದ ಬಗ್ಗೆ ಅಕ್ಕನೊಂದಿಗೆ ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕುಟುಂಬಸ್ಥರು ಅದನ್ನು ಪೊಲೀಸರಿಗೆ ನೀಡಿದ್ದಾರೆ ಎನ್ನಲಾಗಿದೆ. ಆರಂಭದಲ್ಲಿ ಯುಡಿಆರ್ ದಾಖಲಿಸಿದ್ದ ಪೊಲೀಸರು ಇದೀಗ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಹಾನಗಲ್ ಠಾಣೆ ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

