ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನಲ್ಲಿ ರಬ್ಬರ್ ತೋಟದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳು ಹಾಗೂ 7 ಹುಂಜ ಮತ್ತು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಠಾಣೆ ಪಿಎಸ್‌ಐ ಕೌಶಿಕ್ ಬಿ.ಸಿ. ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಪಾಂಡಿಬೆಟ್ಟು ಸಮೀಪದ ರಬ್ಬರ್ ತೋಟದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದರು. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದು ಈ ಪೈಕಿ ಕೊಣಾಲು ನಿವಾಸಿಗಳಾದ ಸುರೇಶ ಮತ್ತು ಪ್ರವೀಣ ಎಂಬುವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.7 ಹುಂಜ, ಜೂಜಾಟಕ್ಕೆ ಬಳಸಿದ 1,700 ನಗದು ಹಾಗೂ 300 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

