Breaking News

ಚಲಿಸುತ್ತಿದ್ದ ಮಾರುತಿ ವ್ಯಾನ್‌ನಲ್ಲಿ ಆಕಸ್ಮಿಕ ಬೆಂಕಿ, ವಾಹನ ಸಂಪೂರ್ಣ ಭಸ್ಮ

ಹುಣಸೂರು: ಮೈಸೂರು–ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಕೋರ್ಟ್ ಸರ್ಕಲ್ ಸಮೀಪ ಬುಧವಾರ ಮಧ್ಯಾಹ್ನ ಚಲಿಸುತ್ತಿದ್ದ ಮಾರುತಿ ವ್ಯಾನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಕೊಡಗು ಜಿಲ್ಲೆಯ ಕುಟ್ಟ ಗ್ರಾಮದ ಮಹಾಲಿಂಗು ಅವರಿಗೆ ಸೇರಿದ ವ್ಯಾನ್ ಇದಾಗಿದ್ದು, ಸರ್ವಿಸ್ ಮಾಡಿಸಲು ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವ್ಯಾನ್‌ನಲ್ಲಿ ಮಹಾಲಿಂಗು ಒಬ್ಬರೇ ಇದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ತಕ್ಷಣ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳದ ಸಮೀಪವೇ ಪೆಟ್ರೋಲ್ ಬಂಕ್ ಇದ್ದಿದ್ದರಿಂದ ಆತಂಕ ಉಂಟಾಗಿತ್ತು. ಸಾರ್ವಜನಿಕರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಹುಣಸೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನ ಸಂಚಾರವನ್ನು ಸುಗಮಗೊಳಿಸಿದರು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *