Breaking News

ನಾಯಕನಹಟ್ಟಿ | ಬಾವಿಯಲ್ಲಿ ಮಹಿಳೆ ಶವಪತ್ತೆ ಪ್ರಕರಣ ; ಇಬ್ಬರ ಬಂಧನ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ವ್ಯಾಪ್ತಿಯ ಎನ್‌.ಮಹದೇವಪುರ ಗ್ರಾಮದ ಬಾವಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಕನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಚಿಕ್ಕಉಳ್ಳಾರ್ತಿ ಗ್ರಾಮದ ಬೋರಯ್ಯ ಹಾಗೂ ಕಾರಯ್ಯ ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೃತ ಸುಮಲತಾಳನ್ನು ಬೋರಯ್ಯ ಅತ್ಯಾಚಾರ ಮಾಡಿ, ಬಳಿಕ ತನ್ನ ಸಹೋದರ ಕಾರಯ್ಯನನ್ನು ಕರೆಸಿಕೊಂಡು ಇಬ್ಬರೂ ಸೇರಿ ಆಕೆಯ ಮುಖಕ್ಕೆ ಹೊಡೆದು ಟವಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಶವವನ್ನು ಬಾವಿಗೆ ಎಸೆದಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಆ.13ರಂದು ಸುಮಲತಾ ಕಾಣೆಯಾಗಿರುವ ಬಗ್ಗೆ ತಂದೆ ಮಹೇಶ್ ದೂರು ನೀಡಿದ್ದರು. ಬಳಿಕ ಎನ್‌.ಮಹದೇವಪುರ ಗ್ರಾಮದ ಜಮೀನಿನ ಬಾವಿಯಲ್ಲಿ ಸುಮಲತಾಳ ಶವ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *