ಬೆಂಗಳೂರು: ನಿತ್ಯ ಮದ್ಯಪಾನ ಮಾಡಿ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಹತ್ಯೆ ಮಾಡಿದ ಘಟನೆ ಶಿವಪುರದಲ್ಲಿ ನಡೆದಿದೆ. ಶ್ರೀಧರ್ ಮೂರ್ತಿ ಅವರು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಮದ್ಯದ ಅಮಲಿನಲ್ಲಿ ಪತ್ನಿಯೊಂದಿಗೆ ಗಲಾಟೆ ಮಾಡಿ ಕತ್ತರಿಯಿಂದ ಹಲ್ಲೆ ಮಾಡಲು ಮುಂದಾಗಿದ್ದ ವೇಳೆ, ತಾಯಿಯ ರಕ್ಷಣೆಗೆ ಬಂದ ಎರಡನೇ ಮಗ ಉದಯ್ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಶ್ರೀಧರ್ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಂದೆಯನ್ನು ಹತ್ಯೆ ಮಾಡಿದ ಆರೋಪದಡಿ ಉದಯ್ನನ್ನು ಬಂಧಿಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

