Breaking News

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ವರ್ಕಾಡಿಯ ಮೊಹಮ್ಮದ್ ಇರ್ಷಾದ್ (30) ಹಾಗೂ ಕಣ್ಣೂರಿನ ನಿತಿನ್ ಕೃಷ್ಣನ್ (27) ಬಂಧಿತರು. ಆರೋಪಿಗಳಿಂದ ₹1.36 ಲಕ್ಷ ಮೌಲ್ಯದ 13.69 ಗ್ರಾಂ ಎಂಡಿಎಂಎ ಹಾಗೂ ₹60 ಸಾವಿರ ಮೌಲ್ಯದ 1.206 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪಂಪ್‌ವೆಲ್–ನಂತೂರು ಸರ್ವಿಸ್ ರಸ್ತೆಯಲ್ಲಿ ಆಟೋರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇರ್ಷಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಎಂಡಿಎಂಎ, ನಗದು ಹಾಗೂ ಆಟೋರಿಕ್ಷಾ ಸೇರಿ ₹2.94 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್‌ನನ್ನು ಕದ್ರಿಯಲ್ಲಿ ಬಂಧಿಸಲಾಗಿದೆ. ನಿತಿನ್‌ನಿಂದ ಗಾಂಜಾ, ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕೆಟಿಎಂ ಬೈಕ್ ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *