Breaking News

ಲೋಕಾಯುಕ್ತ ದಾಳಿ: ಭೂಸ್ವಾಧೀನಾಧಿಕಾರಿ ಬಳಿಯೇ 100 ಎಕರೆ ಕೃಷಿ ಜಮೀನು ಪತ್ತೆ!

ಬೆಂಗಳೂರು: ಆದಾಯಕ್ಕಿಂತ ಅಧಿಕ ಮೌಲ್ಯದ ಆಸ್ತಿ ಗಳಿಸಿರುವ ಆರೋಪದ ಮೇಲೆ ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ 11 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಒಟ್ಟು ₹18.33 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ ಸುಮಾರು ₹12.95 ಕೋಟಿ ಅಕ್ರಮ ಆಸ್ತಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಯು 100 ಎಕರೆ 5 ಗುಂಟೆ ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹14.28 ಕೋಟಿ. ಜೊತೆಗೆ ಎರಡು ಐಷಾರಾಮಿ ಮನೆಗಳು, ₹2.53 ಕೋಟಿ ನಗದು, ₹3.10 ಲಕ್ಷ ಮೌಲ್ಯದ ಚಿನ್ನಾಭರಣ, ₹15 ಲಕ್ಷ ಮೌಲ್ಯದ ವಾಹನಗಳು ಹಾಗೂ ಬ್ಯಾಂಕ್ ಖಾತೆಯಲ್ಲಿ ₹1 ಕೋಟಿ ಪತ್ತೆಯಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷಿ ಭೂಮಿ, ಬ್ಯಾಂಕ್ ಖಾತೆಗಳು ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿರುವ ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಮಲ್ಲಿಕಾರ್ಜುನ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *