Breaking News

ರಾಣೇಬೆನ್ನೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಕಶ್ವಶ್ರೀ ಅವರನ್ನು ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮಾಹಿತಿ ಪಡೆದ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *