ಬೆಂಗಳೂರು: ನಕಲಿ ಕೀ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಐಷಾರಾಮಿ ಕಾರುಗಳನ್ನು ಕದ್ದು ರಾಜಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ₹35 ಲಕ್ಷ ಮೌಲ್ಯದ ಟೊಯೋಟಾ ಫಾರ್ಚೂನರ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕಾರಿನ ಸಿಸ್ಟಮ್ ಡಿಕೋಡ್ ಮಾಡಿ ನಕಲಿ ಕೀ ತಯಾರಿಸಿ ಕಳ್ಳತನ ಮಾಡುತ್ತಿದ್ದರು. ಬಳಿಕ ರಾಜಸ್ಥಾನದ ಬಾರ್ಮರ್, ಬಾಲೋತ್ರಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾರುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಬೆಂಗಳೂರು, ಹೈದರಾಬಾದ್, ರಾಜಸ್ಥಾನ ಹಾಗೂ ತಮಿಳುನಾಡಿನಲ್ಲಿ ದಾಖಲಾಗಿರುವ ಸುಮಾರು 21 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

