Breaking News

‘ನಾವು ಅಕ್ಕ-ತಮ್ಮ, ನಮ್ಮ ಸಂಬಂಧಕ್ಕೆ ಕಳಂಕ ಹಚ್ಚಬೇಡಿ’; ರೈಲಿಗೆ ತಲೆಕೊಟ್ಟ ಯುವಕ-ಯುವತಿ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಬಳಿ ಯುವಕ-ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕುಣಿಗಲ್‌ ಮೂಲದ ರೋಹಿಣಿ ಹಾಗೂ ಬೆಂಗಳೂರು ಮೂಲದ ನವೀನ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇಬ್ಬರೂ ಡೆತ್‌ನೋಟ್ ಬರೆದಿಟ್ಟಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಡೆತ್‌ನೋಟ್‌ನಲ್ಲಿ ತಮ್ಮ ಸಂಬಂಧಕ್ಕೆ ಕಳಂಕ ಹಚ್ಚಬಾರದು ಎಂದು ಮನವಿ ಮಾಡಿದ್ದಾರೆ. ತಾವು ರಕ್ತ ಸಂಬಂಧಿಕರಲ್ಲದಿದ್ದರೂ ಸಹೋದರ-ಸಹೋದರಿಯಂತೆ ಅನ್ಯೋನ್ಯವಾಗಿದ್ದೆವು. ಆದರೆ ಸಂಬಂಧಿಕರು ತಮ್ಮ ಸಂಬಂಧಕ್ಕೆ ಪ್ರೀತಿಯ ಬಣ್ಣ ನೀಡಿದ್ದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿರುವುದಾಗಿ ಬರೆದಿದ್ದಾರೆ ಎನ್ನಲಾಗಿದೆ. ಇಬ್ಬರ ಅಂತ್ಯಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಪಕ್ಕಪಕ್ಕದಲ್ಲೇ ನಡೆಸುವಂತೆ ಡೆತ್‌ನೋಟ್‌ನಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *