Breaking News

ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಆತ್ಮಹತ್ಯೆ, ಡೆತ್​ನೋಟ್​​ ಪತ್ತೆ, ಆದ್ರೆ ಹೆಂಡತಿ ಹೇಳಿದ್ದೇ ಬೇರೆ!

ನೆಲಮಂಗಲ: ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದು ಮುಖ್ಯೋಪಾಧ್ಯಾಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 53 ವರ್ಷದ ಲಕ್ಷ್ಮೀಪ್ರಸಾದ್ ಎಂದು ಗುರುತಿಸಲಾಗಿದ್ದು, ಮಧುಗಿರಿ ಬಳಿಯ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಲಕ್ಷ್ಮೀಪ್ರಸಾದ್ ಡೆತ್‌ನೋಟ್ ಬರೆದಿಟ್ಟಿದ್ದು, ತಮ್ಮ ಸಾವಿಗೆ ಪತ್ನಿಯ ಅನೈತಿಕ ಸಂಬಂಧವೇ ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್‌ನಲ್ಲಿನ ಆರೋಪಗಳ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಪತ್ನಿ ಚಂದ್ರಕಲಾ ಆರೋಪವನ್ನು ನಿರಾಕರಿಸಿದ್ದು, ಪತಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದರು ಹಾಗೂ ಕಳೆದ ಐದು ತಿಂಗಳಿಂದ ಸಂಬಳವೂ ಬಂದಿರಲಿಲ್ಲ ಎಂದು ಹೇಳಿದ್ದಾರೆ. ಕುಟುಂಬದ ಆರ್ಥಿಕ ಸಮಸ್ಯೆಗಳಿಂದಾಗಿ ತಾನೇ ಮನೆಯ ಖರ್ಚು ನೋಡಿಕೊಳ್ಳುತ್ತಿದ್ದೆ ಎಂದು ತಿಳಿಸಿದ್ದಾರೆ. ಡೆತ್‌ನೋಟ್‌ನಲ್ಲಿನ ಆರೋಪ ಹಾಗೂ ಪತ್ನಿಯ ಹೇಳಿಕೆಯನ್ನು ಆಧರಿಸಿ ಪೊಲೀಸರು ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *