Breaking News

ಜೈಲಲ್ಲಿ ಪೊಲೀಸರಿಂದಲೇ ವೇಶ್ಯಾವಾಟಿಕೆ ದಂಧೆ : ಆರೋಪಿಯಿಂದ ಸ್ಪೋಟಕ ವಿಡಿಯೋ ವೈರಲ್!

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಅಧಿಕಾರಿಗಳೇ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ರೌಡಿಶೀಟರ್ ಸುರೇಶ್ ಅಲಿಯಾಸ್ ಸಾಯಿ ಕುಮಾರ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೈಲಿನೊಳಗೆ ಹಣ ನೀಡಿದರೆ ಕೈದಿಗಳಿಗೆ ಮೊಬೈಲ್, ಮದ್ಯ ಸೇರಿದಂತೆ ವಿವಿಧ ವಸ್ತುಗಳು ಲಭ್ಯವಾಗುತ್ತವೆ ಎಂದು ಅವರು ಆರೋಪಿಸಿದ್ದಾರೆ. ಜೈಲಾಧಿಕಾರಿಗಳ ಕುಮ್ಮಕ್ಕಿನಿಂದಲೇ ಜೈಲಿನೊಳಗೆ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸುರೇಶ್ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳು ತಮ್ಮ ಬಳಿ ಇರುವುದಾಗಿ ಹೇಳಿದ್ದಾರೆ. ಸಿಬ್ಬಂದಿಗೆ ಲಂಚ ನೀಡಿದರೆ ಜೈಲು ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಚಟುವಟಿಕೆ ನಡೆಸಲು ಅವಕಾಶ ಸಿಗುತ್ತದೆ ಎಂದು ಅವರು ಆರೋಪಿಸಿದ್ದಾರೆ. ಸುರೇಶ್ ವಿರುದ್ಧ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊಲೆ, ಕೊಲೆ ಯತ್ನ, ಕಳ್ಳತನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದರು. ಬಂಧನದ ಬೆನ್ನಲ್ಲೇ ವಿಡಿಯೋ ಮುನ್ನೆಲೆಗೆ ಬಂದಿದ್ದು, ಆರೋಪಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *