Breaking News

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಏಳು ಪ್ರಯಾಣಿಕರು ಜಸ್ಟ್ ಮಿಸ್!

ಉಡುಪಿ: ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಸಂಚರಿಸುತ್ತಿದ್ದ ವೇಳೆ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಎಲೆಕ್ಟ್ರಿಕಲ್ ಬಾಕ್ಸ್ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ ಹಿನ್ನೆಲೆಯಲ್ಲಿ ನಿರ್ವಾಹಕ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ನಿರ್ವಾಹಕನ ತ್ವರಿತ ಕ್ರಮದಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *