Breaking News

ಧಾರವಾಡದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕತ್ತು ಸೀಳಿ ಯುವಕನ ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನತೆ!

ಧಾರವಾಡ: ನಗರದ ಐನಾಕ್ಸ್ ಚಿತ್ರಮಂದಿರದ ಬಳಿ ಬೆಳ್ಳಂಬೆಳಿಗ್ಗೆ ಯುವಕನೋರ್ವನನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಲಕ್ಷ್ಮಿ ಸಿಂಗನಕೇರಿ ಬಡಾವಣೆಯ ನಿವಾಸಿ ಹನುಮಂತ ಅಣ್ಣಿಗೇರಿ (25) ಎಂದು ಗುರುತಿಸಲಾಗಿದೆ. ಹಂತಕರು ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ತಿಳಿದು ವಿದ್ಯಾಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *