Breaking News

ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್: ಇದರ ಹಿಂದಿನ ಸೂತ್ರಧಾರಿಗಳ ಹೆಸರು ಬಹಿರಂಗ

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯಲ್ಲಿ ಮುಜುಗರಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಮಾಡಿದ ಆರೋಪದಡಿ ರೌಡಿಶೀಟರ್‌ಗಳಾದ ಧರ್ಮ ಹಾಗೂ ಸಾಯಿಕುಮಾರ್ ವಿರುದ್ಧ ಮಹಿಳಾ ಅಧಿಕಾರಿ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ. ವಿಡಿಯೋ ಕಾಲ್ ವೇಳೆ ಧರ್ಮ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಬಳಿಕ ಸಾಯಿಕುಮಾರ್ ಮೂಲಕ ವೈರಲ್ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿಡಿಯೋ ವೈರಲ್‌ನಿಂದ ತಮ್ಮ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಅಧಿಕಾರಿ ದೂರಿದ್ದು, ಇಬ್ಬರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ಅಗತ್ಯವಾಗಿದೆ. ಜೈಲಿನೊಳಗೆ ಕೈದಿಗೆ ಮೊಬೈಲ್ ಹೇಗೆ ದೊರೆಯಿತು, ವಿಡಿಯೋ ಏಕೆ ಚಿತ್ರೀಕರಿಸಲಾಯಿತು ಹಾಗೂ ಇದರ ಹಿಂದೆ ಯಾರಾದರೂ ಪ್ರಭಾವಿ ವ್ಯಕ್ತಿಗಳು ಅಥವಾ ಜಾಲವಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸಬೇಕಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *