Breaking News

ಬಸವರಾಜರೆಡ್ಡಿ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸರು ಅಮಾನತು

ಕೊಪ್ಪಳ: ನಿವೇಶನ ವಿವಾದದಿಂದ ಬೇಸತ್ತು ಬಸವರಾಜರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ವಿ. ನಾರಾಯಣ ಹಾಗೂ ಹೆಡ್ ಕಾನ್‌ಸ್ಟೆಬಲ್ ಲಕ್ಷ್ಮಣ ಅವರನ್ನು ಅಮಾನತು ಮಾಡಲಾಗಿದೆ. ನಿವೇಶನ ವಿವಾದದ ಕುರಿತು ಬಸವರಾಜರೆಡ್ಡಿ ಠಾಣೆಗೆ ದೂರು ನೀಡಿದ್ದರೂ, ಆರೋಪಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಆ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೆಡ್ಡಿ, ಚಿಕಿತ್ಸೆ ಫಲಿಸದೆ ಮರುದಿನ ಮೃತಪಟ್ಟಿದ್ದರು. ಬಳಿಕ ಕುಟುಂಬಸ್ಥರು ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *