Breaking News

ಅರೆನಗ್ನ ಸ್ಥಿತಿಯಲ್ಲಿ ದಲಿತ ಯುವತಿಯ ಮೃತದೇಹ ಪತ್ತೆ; ಅತ್ಯಾಚಾರ ಶಂಕೆ

ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಬಳಿ ದಲಿತ ಸಮುದಾಯದ ಯುವತಿ ಅಶ್ವಿನಿ ಛಲವಾದಿ (22) ಅವರ ಮೃತದೇಹ ಬಾವಿಯ ಮೆಟ್ಟಿಲ ಬಳಿ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕುಟುಂಬಸ್ಥರು ಆರೋಪಿಸಿದ್ದಾರೆ. ಬುಧವಾರ ರಾತ್ರಿ 7 ಗಂಟೆಗೆ ಬಯಲು ಬಹಿರ್ದೆಸೆಗೆ ತೆರಳಿದ್ದ ಅಶ್ವಿನಿ ಮನೆಗೆ ಮರಳಿರಲಿಲ್ಲ. ರಾತ್ರಿಯಿಡೀ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಗುರುವಾರ ಬೆಳಿಗ್ಗೆ ಬಾವಿಯ ಬಳಿ ಆಕೆಯ ಬಟ್ಟೆ, ಚಪ್ಪಲಿ ಹಾಗೂ ಕೆಲವು ಪುರುಷರ ಚಪ್ಪಲಿಗಳು ಪತ್ತೆಯಾಗಿವೆ. ಘಟನೆ ಸಂಬಂಧ ಸಿರವಾರ ಪೊಲೀಸರು ತನಿಖೆ ಕೈಗೊಂಡಿದ್ದು, ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎಸ್ಪಿ ಅರುಣಾಂಗ್ಷುಗಿರಿ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಶ್ವಾನ ದಳದ ನೆರವಿನಿಂದಲೂ ಸಾಕ್ಷ್ಯ ಸಂಗ್ರಹಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *