Breaking News

ಚಿನ್ನಾಭರಣ ಕಳವು ಮಾಡಿದ್ದ ಅಪ್ರಾಪ್ತರಿಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿ ತಾಲೂಕಿನ ತಡಸ ಗ್ರಾಮದಲ್ಲಿ ಮನೆಯ ಅಡುಗೆ ಕೋಣೆಯ ವೆಂಟಿಲೇಟರ್ ಮೂಲಕ ನುಗ್ಗಿ ₹6.39 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಂದ ಒಟ್ಟು ₹6,89,965 ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಆ.17ರಂದು ಕಲೀಂ ಉಲ್ಲಾ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. 18 ಗ್ರಾಂ ಕಿವಿಯೋಲೆ, 22 ಗ್ರಾಂ ಚಿನ್ನದ ನಕ್ಲೇಸ್ ಹಾಗೂ 20 ಗ್ರಾಂ ಮಾಂಗಲ್ಯ ಸರ ಸೇರಿದಂತೆ ಹಲವು ಆಭರಣಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಗಿತ್ತು. ವಿಚಾರಣೆ ವೇಳೆ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರಿಂದ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *