Breaking News

ಹಸು ಕಟ್ಟುವ ವಿಚಾರಕ್ಕೆ ಅಪ್ಪನ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ದುಷ್ಟರು.. ಹೆದರಿದ ಅಪ್ರಾಪ್ತ ಪುತ್ರ, ದುರಂತ ಅಂತ್ಯ

ಮೈಸೂರು: ಮನೆ ಮುಂದೆ ಹಸು ಕಟ್ಟುವ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳ ವಿಕೋಪಕ್ಕೆ ತಿರುಗಿ, ನಂಜನಗೂಡು ತಾಲ್ಲೂಕಿನ ಸಿಂಗಾರಿಪುರದಲ್ಲಿ ದಾರುಣ ಘಟನೆ ನಡೆದಿದೆ. ಶಂಕರ್ (49) ಎಂಬವರ ಮೇಲೆ ಒಂಬತ್ತು ಮಂದಿ ಕಲ್ಲು ಹಾಗೂ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ವೇಳೆ ಶಂಕರ್ ಅವರ ಅಪ್ರಾಪ್ತ ಪುತ್ರ ನಾಗೇಂದ್ರನಿಗೂ ಆರೋಪಿಗಳು ಅವಾಚ್ಯವಾಗಿ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ತಂದೆಯ ಮೇಲಿನ ಹಲ್ಲೆ ಹಾಗೂ ತನಗೂ ಅಪಾಯವಿದೆ ಎಂಬ ಭಯದಿಂದ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮಾದೇಗೌಡ, ಕುಳ್ಳೇಗೌಡ, ಮಾದೇವ ಸೇರಿದಂತೆ ಒಟ್ಟು ಒಂಬತ್ತು ಮಂದಿಯ ವಿರುದ್ಧ ಕೌಲಂದೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *