Breaking News

ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನ ಇಂದಿರಾನಗರದ ಲಕ್ಷ್ಮಿಪುರಂ ಬಡಾವಣೆಯಲ್ಲಿ ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು 21 ವರ್ಷದ ಕವಿತಾ ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಗಸ್ಟ್ 6ರಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ತನಿಖೆ ವೇಳೆ ಕಿರಣ್ ಎಂಬಾತನ ಕಿರುಕುಳ ಬೆಳಕಿಗೆ ಬಂದಿದೆ. 2024ರ ಮೇ ತಿಂಗಳಲ್ಲಿ ಸಂಬಂಧಿಕ ರಾಜು ಅವರನ್ನು ಕವಿತಾ ವಿವಾಹವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಮೂರು ವರ್ಷಗಳಿಂದ ಕವಿತಾ ಹಿಂದೆ ಬಿದ್ದಿದ್ದ ಕಿರಣ್, ಮದುವೆಯ ಬಳಿಕವೂ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮೆಸೇಜ್ ಮಾಡದಿದ್ದರೆ ಸಾಯುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ‘ನನ್ನ ನೆಮ್ಮದಿ ಹಾಳು ಮಾಡಿದ್ದೀಯ, ನಿನ್ನ ಜೀವನ ಹಾಳು ಮಾಡುತ್ತೇನೆ’ ಎಂದು ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಈ ವಿಚಾರವನ್ನು ಪತಿ ರಾಜು ಕುಟುಂಬಸ್ಥರಿಗೆ ತಿಳಿಸಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕಿರಣ್‌ನ ಕಿರುಕುಳದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಇಂದಿರಾನಗರ ಠಾಣೆ ಪೊಲೀಸರು ಕಿರಣ್‌ನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *