Breaking News

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವು, 20 ಮಂದಿಗೆ ಗಾಯ

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ರಸ್ತೆ ಬದಿಯ ಟ್ರೆಂಚ್‌ಗೆ ಬಿದ್ದ ಪರಿಣಾಮ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್‌ನಲ್ಲಿ ಒಟ್ಟು 53 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 20 ಮಂದಿಯನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ರಭಸಕ್ಕೆ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಐಮಂಗಲ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಸ್‌ನ್ನು ಮೇಲಕ್ಕೆತ್ತುವ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *