ಹಾವೇರಿ: ಶಿಗ್ಗಾವಿ ಪಟ್ಟಣದ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಆರೋಪ ಕೇಳಿಬಂದಿದೆ. ಜಾಫರ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಕೃತ್ಯ ಗಮನಿಸಿದ ಸ್ಥಳೀಯರು ಯುವಕನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಆತ ಸ್ಥಳೀಯರೊಂದಿಗೆ ಅವಾಚ್ಯವಾಗಿ ಮಾತನಾಡಿದ್ದಾನೆ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಜನರು ಆತನ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಜಾಫರ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದ ಆರೋಪದಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಹಾಗೂ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

