Breaking News

ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್

ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಠದಲ್ಲಿ ಸ್ವಾಮೀಜಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಅಣ್ಣಪ್ಪ ಸ್ವಾಮಿ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಭಾಗ್ಯವಂತಿ ದೇವರ ಹೆಸರಲ್ಲಿ ಮಠ ಮಾಡಿಕೊಂಡಿದ್ದಾನೆ. ಕಳೆದ ಆರೇಳು ವರ್ಷಗಳಿಂದ ಮಠ ಮಾಡಿಕೊಂಡು ಸಾವಿರಾರು ಭಕ್ತರಿಗೆ ತನ್ನಲ್ಲಿ ದೈವ ಶಕ್ತಿಯಿದೆ ಅಂತ ಸೆಳೆದಿದ್ದಾನೆ. ಇದೆ ಕಾರಣಕ್ಕೆ ಮಠಕ್ಕೆ ಮಂಗಳವಾರ ಹಾಗೂ ಶುಕ್ರವಾರ ನೂರಾರು ಜನ ಭಕ್ತರು ಬಂದು ಹೋಗ್ತಾಯಿದ್ರು. ಆದ್ರೆ ಈ ಸ್ವಾಮೀಜಿ ಕಳೆದ ಮೂರು ವರ್ಷಗಳಿಂದ ತಮ್ಮ ಮಠದಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರನ್ನ ಅಕ್ರಮವಾಗಿ ತನ್ನ ಮಠದಲ್ಲಿ ಇರಿಸಿಕೊಂಡಿದ್ದಾನೆ. ಇದರಲ್ಲಿ 16 ವರ್ಷದ ಅಪ್ರಾಪ್ತ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಹೀಗಾಗಿ ಅಪ್ರಾಪ್ತ ಬಾಲಕಿಯ ತಾಯಿ ಮಹಿಳಾ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಮಹಿಳಾ ಅಭಿವೃದ್ಧಿ ಇಲಾಖೆ ವಲಯ ನಿರೀಕ್ಷಕಿ ನಾಗಮ್ಮ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಣ್ಣಪ್ಪ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *