Breaking News

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು!

ಚಿಕ್ಕಮಗಳೂರು: ನಾಟಿ ತುಪ್ಪದ ಹೆಸರಿನಲ್ಲಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಮಾರ್ಕೆಟ್ ರಸ್ತೆಯ ಪಾಳುಬಿದ್ದ ಮನೆಯೊಂದರಲ್ಲಿ ಡಾಲ್ಡಾ, ವನಸ್ಪತಿ, ಪಾಮ್ ಆಯಿಲ್ ಸೇರಿದಂತೆ ವಿವಿಧ ಪದಾರ್ಥಗಳು ಪತ್ತೆಯಾಗಿವೆ. ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಪೊಲೀಸರ ನೆರವಿನಿಂದ ಬೀಗ ಮುರಿದು ಮನೆಗೆ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ಬಳ್ಳಾರಿಯಿಂದ ಬಂದವರಾಗಿದ್ದು, ಹಲವು ವರ್ಷಗಳಿಂದ ಕಲಬೆರಕೆ ತುಪ್ಪ ತಯಾರಿಸಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *