ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ವೀರಸಂದ್ರ ಸಿಗ್ನಲ್ ಬಳಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ₹9 ಕೋಟಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 18ರಂದು ಕ್ರೆಟಾ ಕಾರನ್ನು ತಡೆದು ಪರಿಶೀಲಿಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಹಣ ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್ಗೆ ಸೇರಿದ್ದು ಎನ್ನಲಾಗಿದೆ. ಬಳಿಕ ಅವರ ನಿವಾಸದಲ್ಲಿ ಐಟಿ ಅಧಿಕಾರಿಗಳು ನಡೆಸಿದ ಪರಿಶೀಲನೆಯಲ್ಲಿ ಹೆಚ್ಚುವರಿಯಾಗಿ ₹1.3 ಕೋಟಿ ನಗದು ಪತ್ತೆಯಾಗಿದೆ. ಒಟ್ಟು ₹10.3 ಕೋಟಿ ನಗದಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹಣದ ಮೂಲ, ಸಾಗಾಟದ ಉದ್ದೇಶ ಹಾಗೂ ಸೂಕ್ತ ಲೆಕ್ಕಪತ್ರಗಳಿವೆಯೇ ಎಂಬ ಬಗ್ಗೆ ಆದಾಯ ತೆರಿಗೆ ಇಲಾಖೆ ತನಿಖೆ ಮುಂದುವರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

