Breaking News

ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ವಶಕ್ಕೆ ಪಡೆದ ಪೊಲೀಸರು

ಗದಗ: ತಾಲೂಕಿನ ಹರ್ತಿ ಗ್ರಾಮದ ಬಳಿ ಸರ್ಕಾರಿ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಬಾಂಗ್ಲಾದೇಶಿ ವಲಸಿಗರನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಸಾಕೀಬ್ (26) ಹಾಗೂ ಮೊಹಮ್ಮದ್ ಡಿಲ್ವರ್ ಹುಸೇನ್ (22) ಪಾಸ್‌ಪೋರ್ಟ್, ವೀಸಾ ಇಲ್ಲದೆ ಭಾರತಕ್ಕೆ ಬಂದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಆರೋಪಿಗಳು ಕೊಲ್ಕತ್ತಾದಲ್ಲಿ ಏಜೆಂಟರ ಮೂಲಕ ಆಧಾರ್ ಹಾಗೂ ಪಾನ್ ಕಾರ್ಡ್ ಸೇರಿದಂತೆ ನಕಲಿ ದಾಖಲೆಗಳನ್ನು ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಇಬ್ಬರೂ ಬೆಂಗಳೂರು, ಮಂಗಳೂರು, ಕೊಪ್ಪಳ, ಗಂಗಾವತಿ ಸೇರಿದಂತೆ ವಿವಿಧೆಡೆ ಕೆಲಸ ಮಾಡಿದ್ದು, ಕಳೆದ ಎರಡು ತಿಂಗಳಿಂದ ಹರ್ತಿ ಬಳಿ ವಾಸವಿದ್ದರು. ಸದ್ಯ ಇಬ್ಬರನ್ನು ಧಾರವಾಡದ ಆಶ್ರಯ ನಿಲಯದಲ್ಲಿ ಇರಿಸಲಾಗಿದೆ. ಬೆಂಗಳೂರಿನ FRRO ವರದಿಗಾಗಿ ಪೊಲೀಸರು ಕಾಯುತ್ತಿದ್ದು, ವರದಿ ಬಂದ ಬಳಿಕ ಬಾಂಗ್ಲಾದೇಶ ಗಡಿಭಾಗದ BSF ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಎಸ್‌ಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.

Share News

About BigTv News

Check Also

ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಾಣ ಪ್ರಶ್ನಿಸಿದ್ದಕ್ಕೆ ಹಲ್ಲೆ-

ಬೆಂಗಳೂರು ಉತ್ತರ ತಾಲೂಕಿನ ಕಾಡಸೊಣ್ಣಪನಹಳ್ಳಿ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದನ್ನು ಪ್ರಶ್ನಿಸಿದ ಕುಟುಂಬದವರ ಮೇಲೆ ಗುಂಪೊಂದು …

Leave a Reply

Your email address will not be published. Required fields are marked *