Breaking News

ಆತ್ಮಹತ್ಯೆ ಕೇಸ್, ಪಿಐ-ಮುಖ್ಯಪೇದೆ ಅಮಾನತು

ಕನಕಗಿರಿ: ಬಸವರಾಜರೆಡ್ಡಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಟ್ಟಣ ಠಾಣೆಯ ಪಿಐ ವಿ.ನಾರಾಯಣ ಹಾಗೂ ಮುಖ್ಯಪೇದೆ ಲಕ್ಷ್ಮಣ ಅವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಅಮಾನತುಗೊಳಿಸಿದ್ದಾರೆ. ಜಮೀನು ಒತ್ತುವರಿ ಕುರಿತು ಬಸವರಾಜರೆಡ್ಡಿ ಆ.12ರಂದು ಪಪಂಗೆ ದೂರು ನೀಡಿದ್ದರು. ಬಳಿಕ ಆ.13ರಂದು ಠಾಣೆಗೆ ತೆರಳಿ ದೂರು ನೀಡಲು ಮುಂದಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತು ಆ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು, ಚಿಕಿತ್ಸೆ ಫಲಿಸದೆ ಆ.16ರಂದು ಮೃತಪಟ್ಟಿದ್ದರು. ಪೊಲೀಸ್ ಹಾಗೂ ಪಪಂ ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಅಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಪಿಐ ಹಾಗೂ ಮುಖ್ಯಪೇದೆ ಅಮಾನತುಗೊಂಡಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *