Breaking News

ಅಸ್ವಸ್ಥನನ್ನು ಬೆತ್ತಲೆಗೊಳಿಸಿ ಥಳಿತ: ಎಲ್ಲ ಹಲ್ಲೆಕೋರರ ವಿರುದ್ಧ ಕೇಸು -ಹೈಕೋರ್ಟ್

ಬೆಂಗಳೂರು: ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಮಸಣಾಪುರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದಲ್ಲಿ, ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಗುರುತಿಸಿ ಪ್ರಕರಣ ದಾಖಲಿಸುವಂತೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಹಲ್ಲೆಯ ವಿಡಿಯೋ ಲಭ್ಯವಿದ್ದು, ಅದರ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಬೇಕು. ತನಿಖೆ ನಿಧಾನಗತಿಯಲ್ಲಿ ನಡೆಯಬಾರದು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೂಚಿಸಿದೆ. ಈವರೆಗೆ ನಡೆದ ತನಿಖೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ ನಿರ್ದೇಶಿಸಿದೆ. ಪ್ರಕರಣದಲ್ಲಿ ಅರ್ಜಿದಾರ ಚಂದ್ರುಗೆ ಮಾತ್ರ ಮಧ್ಯಂತರ ರಕ್ಷಣೆ ಅನ್ವಯಿಸಲಿದ್ದು, ಉಳಿದ ಆರೋಪಿಗಳು ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ. ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *