Breaking News

ಯುವತಿಯ ಮೃತದೇಹ ಪತ್ತೆ ಪ್ರಕರಣ: ಅತ್ಯಾಚಾರಗೈದು ಕೊಲೆ ಆರೋಪ; ಮೂವರ ಬಂಧನ

ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಬಾವಿಯಲ್ಲಿ ಯುವತಿಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಯಲು ಪ್ರದೇಶಕ್ಕೆ ಶೌಚಕ್ಕೆ ತೆರಳಿದ್ದ ಯುವತಿಯ ಮೃತದೇಹ ಮರುದಿನ ಊರಿನ ಬಾವಿಯ ಮೆಟ್ಟಿಲ ಮೇಲೆ ಪತ್ತೆಯಾಗಿತ್ತು. ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆಕೆಯ ತಂದೆ ತಿಮ್ಮರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಗುಂಡ್ಯ (22), ಮಹಾಂತೇಶ (22), ವೀರೇಶ (23) ಹಾಗೂ ಮುಂಡರಗಿ ಬಸವರಾಜ (45) ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಪಿಐ ಎಂ.ಶಶಿಕಾಂತ ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಐಜಿ ಪಿಎಸ್ ಹರ್ಷ, ಜಿಲ್ಲಾಧಿಕಾರಿ ಪೂವಿತಾ ಎಸ್., ಅಪರ ಜಿಲ್ಲಾಧಿಕಾರಿ ಶಿವನಂದ ಭಜಂತ್ರಿ ಹಾಗೂ ಡಿವೈಎಸ್ಪಿ ಚಂದ್ರಶೇಖರ ನಾಯಕ ಅವರು ಗುರುವಾರ ಸಂಜೆ ಹೊಕ್ರಾಣಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *