Breaking News

ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ… ವೈದ್ಯ ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

ಕುಂದಾಪುರ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಶಿಸ್ತು ಪ್ರಾಧಿಕಾರಿ ಹಾಗೂ ಆಯುಕ್ತ ಗುರುದತ್ತ ಹೆಗಡೆ ಅವರು ಶುಕ್ರವಾರ ಅಮಾನತು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ಸರ್ಜನ್ ಆಗಿರುವ ಮಹೇಂದ್ರ ಕುಮಾರ್ ಶೆಟ್ಟಿ ಅವರು ಕುಂದಾಪುರದ ಹೋಟೆಲ್‌ನಲ್ಲಿ ಪತ್ರಕರ್ತ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೈದ್ಯರ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *