Breaking News

ಪೋರ್ಟರ್ ಅಪ್ಲಿಕೇಶನ್ ಬಳಸಿ ನಕಲಿ ಔಷಧಿ ರವಾನೆ – ಎಸ್‌ಐಡಿ ತನಿಖೆಯಲ್ಲಿ ಪತ್ತೆ!

ರಾಮನಗರ: ಬಿಡದಿ ಸಮೀಪದ ಫಾರ್ಮ್‌ಹೌಸ್‌ನಲ್ಲಿ ನಡೆಯುತ್ತಿದ್ದ ಬೃಹತ್ ನಕಲಿ ಔಷಧ ತಯಾರಿಕೆ ಹಾಗೂ ಮರುಪ್ಯಾಕಿಂಗ್ ಜಾಲವನ್ನು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಪ್ರಕರಣದ ಸಂಪೂರ್ಣ ಜಾಲ ಭೇದಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದ್ದು, ತನಿಖೆ ತೀವ್ರಗೊಂಡಿದೆ. ದಾಳಿ ವೇಳೆ ಸುಮಾರು ₹5ರಿಂದ ₹6 ಕೋಟಿ ಮೌಲ್ಯದ ನಕಲಿ ಮಾತ್ರೆಗಳು, ಪ್ರಸಿದ್ಧ ಔಷಧ ಕಂಪನಿಗಳ ನಕಲಿ ಲೇಬಲ್‌ಗಳು ಹಾಗೂ ಪ್ಯಾಕಿಂಗ್ ಯಂತ್ರೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ಅವಧಿ ಮೀರಿದ ಔಷಧಗಳನ್ನು ಸಂಗ್ರಹಿಸಿ, ಹೊಸ ಲೇಬಲ್ ಅಂಟಿಸಿ ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತಿತ್ತು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನಕಲಿ ಔಷಧಗಳನ್ನು ವಿವಿಧ ಸ್ಥಳಗಳು ಹಾಗೂ ಮೆಡಿಕಲ್ ಶಾಪ್‌ಗಳಿಗೆ ತಲುಪಿಸಲು ಖಾಸಗಿ ಲಾಜಿಸ್ಟಿಕ್ಸ್ ಆ್ಯಪ್ ‘ಪೋರ್ಟರ್’ ಅನ್ನು ಆರೋಪಿಗಳು ಬಳಸುತ್ತಿದ್ದರು ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಶಾಂತ್ ಮತ್ತು ತೇಜಸ್ ಸೇರಿದಂತೆ ಇತರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ತಂದೊಡ್ಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಿಬಿಐ ತನಿಖೆಗೆ ವಹಿಸುವಂತೆ ವಿಧಾನಸಭೆಯಲ್ಲೂ ಆಗ್ರಹ ಕೇಳಿಬಂದಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *