ಮೈಸೂರು: ಪತ್ನಿಯ ಮೇಲೆ ಅನುಮಾನ ಹೊಂದಿದ್ದ ವ್ಯಕ್ತಿಯೊಬ್ಬ ಲಾಂಗ್‌ನಿಂದ ಪತ್ನಿ ಹಾಗೂ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಣಸೂರು ನಗರದ ರಜಾಕ್ ಮೊಹಲ್ಲಾದಲ್ಲಿ ನಡೆದಿದೆ. ಸಮಿವುಲ್ಲಾ ಎಂಬಾತ ಕೃತ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ತಡರಾತ್ರಿ ಎಲ್ಲರೂ ಮಲಗಿದ್ದ ವೇಳೆ ಮುಂಬಾಗಿಲಿಗೆ ಚಿಲಕ ಹಾಕಿ ಪತ್ನಿ ಸಮೀನಾಬಾನು ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತಾಯಿಯ ಕೂಗಾಟ ಕೇಳಿ ರಕ್ಷಣೆಗೆ ಬಂದ 10 ವರ್ಷದ ಪುತ್ರ ಅಬ್ನಾನ್ ಶರೀಫ್ ಹಾಗೂ ಮಗಳ ಮೇಲೂ ಹಲ್ಲೆ ನಡೆಸಿದ್ದು, ಸಮೀನಾಬಾನು ಗಂಭೀರವಾಗಿ ಗಾಯಗೊಂಡಿದ್ದಾರೆ. ನೆರೆಹೊರೆಯವರು ಬರುವಷ್ಟರಲ್ಲಿ ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಣಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

