Breaking News

ಪಾಕ್‌ ಟೆರರಿಸ್ಟ್‌ ಜೊತೆ ಸಂಪರ್ಕ – ದೊಡ್ಡಬಳ್ಳಾಪುರದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್‌!

ದೊಡ್ಡಬಳ್ಳಾಪುರ: ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ ಅಂತರರಾಷ್ಟ್ರೀಯ ಅಪರಾಧ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸೈಯದ್ ಅಬೂಬಕರ್ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಹಲವು ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಹಾಗೂ ಅನುಮಾನಾಸ್ಪದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಪಾಕಿಸ್ತಾನದಲ್ಲಿರುವ ಗ್ಯಾಂಗ್‌ಸ್ಟರ್‌ಗಳೊಂದಿಗೆ ಡಿಜಿಟಲ್ ಮಾಧ್ಯಮಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಸ್ಥಳೀಯ ಜಾಲ ಬಳಸಿಕೊಂಡು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡಲು ಅಥವಾ ಹಣಕಾಸಿನ ವಹಿವಾಟು ನಡೆಸಲು ಸಂಚು ರೂಪಿಸಿದ್ದನೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳು ಆರೋಪಿಯನ್ನು ವಿಚಾರಣೆ ನಡೆಸುತ್ತಿವೆ. ಕರ್ನಾಟಕ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಆತನಿಗೆ ಯಾರೆಲ್ಲಾ ಸಹಕರಿಸುತ್ತಿದ್ದರು ಮತ್ತು ಸಂಪರ್ಕದ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *