Breaking News

ದಾಂಡೇಲಿಯಲ್ಲಿ ಖಾಕಿ ಆಪರೇಷನ್: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರು ಅರೆಸ್ಟ್

ದಾಂಡೇಲಿಯ ಮಾರುತಿ ನಗರದ ಅಂಬೇಡ್ಕರ್ ಶಾಲೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೆ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ ಸುಮಾರು ₹10 ಸಾವಿರ ಮೌಲ್ಯದ 241 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಾರುತಿ ನಗರದ ಅಕ್ಷಯ ವಾಡೇಕರ (27), ಹಳಿಯಾಳ ತಾಲೂಕಿನ ತೌಸೀಫ್ ನಜೀರ ಅಹಮ್ಮದ್ ಅಜಗಾಂವಕರ (22), ಟೌನಶಿಪ್‌ನ ಸಾಹೀಲ್ ಅನ್ವರ್ ಶೇಖ್ (21) ಹಾಗೂ ರಾಜೇಶ ದಯಾಶಂಕರ ಯಾದವ್ (23) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕುರಿತು ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *