Breaking News

ಜ್ಯುವೆಲ್ಲರಿ ಶಾಪ್ ಕಳ್ಳತನ ಕೇಸ್, ಅಂತರರಾಜ್ಯ ಖದೀಮರ ಹೆಡೆಮುರಿ ಕಟ್ಟಿದ ಖಾಕಿ!

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಮಾನಜ್ಜ ಜ್ಯುವೆಲ್ಲರಿ ಅಂಗಡಿಯಲ್ಲಿ ಆಗಸ್ಟ್ 12ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ರಾಜಸ್ಥಾನದ ನಾಲ್ವರು ಹಾಗೂ ಮಧ್ಯಪ್ರದೇಶದ ಓರ್ವ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆರೋಪಿಗಳು ಅಂಗಡಿಯ ಶಟರ್ ಬೀಗ ಮುರಿದು 7 ಕೆ.ಜಿ. ಬೆಳ್ಳಿ ಆಭರಣಗಳನ್ನು ದೋಚಿದ್ದರು. ಬಂಧಿತರಿಂದ ₹17 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ₹5 ಲಕ್ಷ ಮೌಲ್ಯದ ಐ20 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣವನ್ನು ತ್ವರಿತವಾಗಿ ಭೇದಿಸಿದ ಕಿತ್ತೂರು ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಸ್ಥಳೀಯ ವರ್ತಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *