Breaking News

ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ: ರೌಡಿಶೀಟರ್ ಶಬ್ಬೀರ್ ಕೊಲೆಯ ಪ್ರತಿಕಾರವೇ?

ಬೆಂಗಳೂರಿನ ಮಡಿವಾಳದ ಮುಖ್ಯರಸ್ತೆಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಸುಹೇಲ್ ಅವರನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶನಿವಾರ ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಿಗ್ನಲ್ ಬಳಿ ಟ್ರಾಫಿಕ್‌ನಲ್ಲಿ ನಿಂತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ಆರೋಪಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸುಹೇಲ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇರಲಿಲ್ಲ. ಆದರೆ, ಜನವರಿ 13ರಂದು ನಡೆದ ರೌಡಿಶೀಟರ್ ಶಬ್ಬೀರ್ ಹತ್ಯೆ ಪ್ರಕರಣದಲ್ಲಿ ಅವರ ಸಹೋದರರು ಆರೋಪಿಗಳಾಗಿದ್ದರು. ಸಹೋದರರ ಮೇಲಿನ ಸೇಡಿಗಾಗಿ ಶಬ್ಬೀರ್ ಸಹಚರರು ಸುಹೇಲ್‌ನನ್ನು ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಹೋದರನ ಸಾವಿನಿಂದ ನಜೀರ್ ಆಕ್ರೋಶ ವ್ಯಕ್ತಪಡಿಸಿದ್ದು, ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *