Breaking News

ಹೆತ್ತವರನ್ನು ಕೊಲ್ಲೇನೆಂದು ಹೇಳಿ ಒಂಬತ್ತನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ವೇಣೂರಿನಲ್ಲಿ ಆಟೋ ಚಾಲಕ ಬಂಧನ

ಬೆಳ್ತಂಗಡಿ: 14 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೇಣೂರು ಪೊಲೀಸರು ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್‌ನನ್ನು ಬಂಧಿಸಿದ್ದಾರೆ. 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಬಾಲಕಿಯನ್ನು ಆರೋಪಿ ಕೆಲ ತಿಂಗಳಿಂದ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಅನುಚಿತವಾಗಿ ವರ್ತಿಸಿ, ವಿರೋಧಿಸಿದರೆ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ. ಆಗಸ್ಟ್ 13ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ನುಗ್ಗಿದ ಆರೋಪಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆಗಸ್ಟ್ 15ರಂದು ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ BNS ಹಾಗೂ ಪೋಕೋ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *