Breaking News

ಜೆರಾಕ್ಸ್ ಅಂಗಡಿಯಲ್ಲಿ ದಾಖಲೆ ಸುಟ್ಟ ವಿಚಾರಕ್ಕೆ ಗಲಾಟೆ, ಪರಸ್ಪರ ಹಲ್ಲೆ: ಕೌಂಟರ್ ಕೇಸ್ ದಾಖಲು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಪ್ರಕರಣ..!

ಪುತ್ತೂರು: ದಾಖಲೆ ಲ್ಯಾಮಿನೇಷನ್ ವೇಳೆ ತಾಂತ್ರಿಕ ದೋಷದಿಂದ ದಾಖಲೆ ಸುಟ್ಟುಹೋದ ವಿಚಾರಕ್ಕೆ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ದರ್ಭೆಯಲ್ಲಿ ನಡೆದಿದೆ. ಘಟನೆಯಲ್ಲಿ ಎರಡೂ ಕಡೆಯಿಂದ ದೂರು ಹಾಗೂ ಪ್ರತಿ ದೂರು ದಾಖಲಾಗಿದೆ. ಸುದರ್ಶನ್ ಪೈ ಅವರನ್ನು ಠಾಣೆಗೆ ಕರೆದೊಯ್ಯುವ ವೇಳೆ ಪೊಲೀಸರ ಕರ್ತವ್ಯಕ್ಕೆ ಕೆಲವರು ಅಡ್ಡಿಪಡಿಸಿದ್ದು, ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತಿದೆ. ಅಂಗಡಿಯ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ಹರಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *