Breaking News

ಭಿಕ್ಷುಕಿ ನಿಧನ: ಮನೆಯಲ್ಲಿ 8 ಲಕ್ಷಕ್ಕೂ ಅಧಿಕ ಹಣ ಪತ್ತೆ

ಮಂಡ್ಯ: ಅಕಾಲಿಕವಾಗಿ ಮೃತಪಟ್ಟ ಭಿಕ್ಷುಕಿಯೊಬ್ಬರ ಮನೆಯಲ್ಲಿ ಬರೋಬ್ಬರಿ ₹8.50 ಲಕ್ಷ ಹಣ ಪತ್ತೆಯಾಗಿದ್ದು, ಈ ಹಣವನ್ನು ಅವರು ಹಲವು ವರ್ಷಗಳಿಂದ ಭಿಕ್ಷೆ ಬೇಡಿ ಸಂಗ್ರಹಿಸಿದ್ದರು. ಹಣವನ್ನು ಮೂಟೆಯಲ್ಲಿ ಇಟ್ಟಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುತ್ತಲು ಬಡಾವಣೆಯ ಸಬ್ದರಿಯಾ ಬಾದ್ ನಿವಾಸಿ 68 ವರ್ಷದ ಹೂರ್ ಮೃತ ಭಿಕ್ಷುಕಿ. ಆಕೆಗೆ ಇಬ್ಬರು ಸಹೋದರರಿದ್ದು, ಅವರಿಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಹೋದರಿ ಮೃತಪಟ್ಟ ಸುದ್ದಿ ತಿಳಿದು ಮನೆಗೆ ಬಂದಾಗ, ₹10 ಮತ್ತು ₹20 ಮುಖಬೆಲೆಯ ಕಂತೆ ಕಂತೆ ನೋಟುಗಳು ಚೀಲದಲ್ಲಿ ಪತ್ತೆಯಾಗಿವೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಭಿಕ್ಷೆ ಬೇಡಿ ಸಂಗ್ರಹಿಸಿರುವುದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಬಳಿಕ ಬಡಾವಣೆಯ ಮುಖಂಡರ ಸಮ್ಮುಖದಲ್ಲಿ ಹಣವನ್ನು ಇಬ್ಬರು ಸಹೋದರರಿಗೆ ಸಮಾನವಾಗಿ ಹಂಚಿಕೆ ಮಾಡಲಾಗಿದ್ದು, ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *