Breaking News

ಚಿಕ್ಕಮಗಳೂರಲ್ಲಿ ಟಿಪ್ಪು ಕಟೌಟ್ ಗೆ ಪಾಕಿಸ್ತಾನ ಹಾಡು ಬಳಸಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ : ‘FIR’ ದಾಖಲು!

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಕಟೌಟ್ ಗೆ ಪಾಕಿಸ್ತಾನ ಪರ ಇರುವ ಸಾಂಗ್ ಬಳಸಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಲಾಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಸುಮೋಟೋ ಕೇಸ್ ದಾಖಲಾಗಿದೆ. ಪವರ್ ಟಿಪ್ಪು ಬಾಯ್ಸ್ ಇನ್‌ಸ್ಟಾಗ್ರಾಮ್ ಪೇಜ್ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. ದೇಶ ವಿರೋಧಿ ಕೃತ್ಯ ಕೋಮು ಪ್ರಚೋದನೆಯಡಿ ದಾಖಲಾಗಿದೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರಲ್ಲಿ ಟಿಪ್ಪು ಕಟೌಟ್ ಹಾಕಲಾಗಿದ್ದು, ನಗರದ ಟಿಪ್ಪು ನಗರದಲ್ಲಿ ಈ ಒಂದು ಕಟೌಟ್ ಹಾಕಲಾಗಿದೆ. ಕಟ್ ಔಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಸಿ ಇನ್‌ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿತ್ತು ಸದ್ಯಕ್ಕೆ ಪ್ರಕರಣ ದಾಖಲಿಸಿಕೊಂಡು ಚಿಕ್ಕಮಗಳೂರು ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *