ಜಮಖಂಡಿ: ಬಸ್ ನಿಲ್ದಾಣದ ಬಳಿ ಜೇಬಿನಲ್ಲಿಟ್ಟಿದ್ದ ಪವರ್ ಬ್ಯಾಂಕ್ ಏಕಾಏಕಿ ಸ್ಫೋಟಗೊಂಡು ಯುವಕ ಗಾಯಗೊಂಡ ಘಟನೆ ನಡೆದಿದೆ. ಸಿದ್ದು ಎಂಬ ಯುವಕನ ಕಾಲು, ಹೊಟ್ಟೆ ಹಾಗೂ ಸೊಂಟದ ಭಾಗಕ್ಕೆ ಸುಟ್ಟ ಗಾಯಗಳಾಗಿದ್ದು, ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಯುವಕನ ಶರ್ಟ್ ಹಾಗೂ ಪ್ಯಾಂಟ್ ಸುಟ್ಟುಹೋಗಿದ್ದು, ಪವರ್ ಬ್ಯಾಂಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾನೆ. ಆತ ಯಾವ ಕಂಪನಿಯ ಪವರ್ ಬ್ಯಾಂಕ್ ಬಳಸುತ್ತಿದ್ದ ಎಂಬುದು ತಿಳಿದುಬಂದಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

