ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಆರೋಪಿಯೊಬ್ಬ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಮುಂಬೈ ಗ್ಯಾಂಗ್‌ಸ್ಟರ್ ಹಾಗೂ ಬಿಹಾರದ ಅನುಜ್ ಪಾಟೀಲ್ (35) ಗುಂಡೇಟಿಗೆ ಒಳಗಾದ ಆರೋಪಿ. ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಕರೆತರುತ್ತಿದ್ದ ವೇಳೆ ಅನುಜ್, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೊಲ್ಲೂರು ಠಾಣೆ ಪಿಎಸ್‌ಐ ವಿನಯ್ ಅವರ ಆಯುಧ ಕಸಿದು ಗುಂಡು ಹಾರಿಸಿದ್ದಾನೆ ಎಂದು ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಕುಂದಾಪುರ ಎಸ್‌ಐ ನಂಜ ನಾಯಕ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಡೇವಿಡ್ ಹತ್ಯೆಗೆ ಅನುಜ್ ಶೂಟರ್‌ಗಳನ್ನು ಕಳುಹಿಸಿದ್ದ ಎನ್ನಲಾಗಿದ್ದು, 2017ರಿಂದ ತಲೆಮರೆಸಿಕೊಂಡಿದ್ದ. ಮಹಾರಾಷ್ಟ್ರದಲ್ಲಿ ಆತನ ವಿರುದ್ಧ ಮೋಕಾ ಕಾಯ್ದೆಯಡಿ ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಿವೆ. ಗಾಯಗೊಂಡ ಅನುಜ್‌ನನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

