Breaking News

ಹನೂರು ಶೂಟೌಟ್‌ ಕೇಸ್​: ಮೃತರ ಒಳ ಉಡುಪಿನಲ್ಲಿ ಪ್ರೈಮರ್ ಪತ್ತೆ; FSL ವರದಿಯಲ್ಲಿ ಸ್ಫೋಟಕ ಅಂಶ ಬಯಲು

ಹನೂರು ಅರಣ್ಯ ಪ್ರದೇಶದಲ್ಲಿ ನಡೆದ ಮೂವರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಅಂತೋನಿಸ್ವಾಮಿ, ಪೀಟರ್ ಹಾಗೂ ಕುಮಾರ್ ಅವರ ಮರಣೋತ್ತರ ಪರೀಕ್ಷೆ ಮತ್ತು FSL ವರದಿ ಹಲವು ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದೆ. ಮೂವರ ಎದೆ, ಹೊಟ್ಟೆ ಹಾಗೂ ತೊಡೆ ಭಾಗಕ್ಕೆ ಗುಂಡೇಟು ತಗುಲಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಂತೋನಿಸ್ವಾಮಿ ಹಾಗೂ ಪೀಟರ್ ಅವರ ಒಳಉಡುಪುಗಳಲ್ಲಿ ಗನ್‌ಪೌಡರ್‌ನ ಪ್ರೈಮರ್ ಅಂಶಗಳು ಪತ್ತೆಯಾಗಿದ್ದು, ಅತ್ಯಂತ ಸಮೀಪದಿಂದ ಗುಂಡಿನ ಚಕಮಕಿ ನಡೆದಿರುವ ಸಾಧ್ಯತೆಯನ್ನು FSL ವರದಿ ಸೂಚಿಸಿದೆ. ಪ್ರಕರಣದ ತನಿಖೆ ತೀವ್ರಗೊಳಿಸಿರುವ ಪೊಲೀಸರು ಘಟನೆಯ ದಿನ ಸ್ಥಳದಲ್ಲಿದ್ದ 12 ಅರಣ್ಯ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಜೊತೆಗೆ ಅರಣ್ಯ ಇಲಾಖೆಯ ನಾಲ್ಕನೇ ಆರೋಪಿಯಾಗಿರುವ ಮಹಿಮ್‌ದಾಸ್‌ನ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದು, ಆತನ ಹೇಳಿಕೆ ಮತ್ತು ಸಿಬ್ಬಂದಿಯ ಹೇಳಿಕೆಗಳನ್ನು ತಾಳೆಹಾಕಿ ಎನ್‌ಕೌಂಟರ್‌ನ ನೈಜ ಸತ್ಯಾಸತ್ಯತೆ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ಪುಂಡರ ಹಾವಳಿ: ಗಾಂಜಾ ಮತ್ತಿನಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರು: ಯಲಹಂಕದ ಅಟ್ಟೂರು ಲೇಔಟ್‌ನಲ್ಲಿ ಡೆಲಿವರಿ ಬಾಯ್‌ ಮೇಲೆ ಆರೇಳು ಮಂದಿ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. …

Leave a Reply

Your email address will not be published. Required fields are marked *