Breaking News

ಬಳ್ಳಾರಿಯಲ್ಲಿ ಟೈರ್ ಬ್ಲಾಸ್ಟ್: 20ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ಬಳ್ಳಾರಿ: ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಮಹೇಂದ್ರ ಜೀತೋ ಗೂಡ್ಸ್ ವಾಹನ ಅಪಘಾತಕ್ಕೀಡಾದ ಘಟನೆ ಬಳ್ಳಾರಿ ತಾಲೂಕಿನ ಚರಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-67ರಲ್ಲಿ ನಡೆದಿದೆ. ಆಂಧ್ರಪ್ರದೇಶದಿಂದ ಭತ್ತದ ಸಸಿ ನಾಟಿ ಕೆಲಸಕ್ಕೆ ಬಂದಿದ್ದ 26ಕ್ಕೂ ಹೆಚ್ಚು ಕೃಷಿ ಕಾರ್ಮಿಕರು ವಾಹನದಲ್ಲಿದ್ದರು. ಅಪಘಾತದಲ್ಲಿ 15ರಿಂದ 20 ಮಂದಿ ಗಾಯಗೊಂಡಿದ್ದು, ನಾಲ್ಕೈದು ಮಂದಿಗೆ ಮೂಳೆ ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಎರಡು ಆಂಬುಲೆನ್ಸ್‌ಗಳ ಮೂಲಕ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಗ್ರಾಮೀಣ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ಪುಂಡರ ಹಾವಳಿ: ಗಾಂಜಾ ಮತ್ತಿನಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರು: ಯಲಹಂಕದ ಅಟ್ಟೂರು ಲೇಔಟ್‌ನಲ್ಲಿ ಡೆಲಿವರಿ ಬಾಯ್‌ ಮೇಲೆ ಆರೇಳು ಮಂದಿ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. …

Leave a Reply

Your email address will not be published. Required fields are marked *